Acts 11:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾರ್ನಬನು ಅಲ್ಲಿ ಸೌಲನನ್ನು ಕಂಡುಕೊಂಡು ಅವನನ್ನು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಸೌಲನು ಮತ್ತು ಬಾರ್ನಬನು ಅಂತಿಯೋಕ್ಯದಲ್ಲಿ ಒಂದು ವರ್ಷ ಪೂರ್ತಿ ಸಭೆಯ ಅನ್ಯೋನ್ಯತೆಯಲ್ಲಿ ಇದ್ದುಕೊಂಡು ಅನೇಕ ಜನರಿಗೆ ಬೋಧಿಸಿದರು. ಯೇಸುವಿನ ಹಿಂಬಾಲಕರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.
Kannada BSI Bible 2016
ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
Kannada Bible (KNCL) BSI 2016
ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಸೌಲನನ್ನು ಭೇಟಿಯಾಗಿ, ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅನಂತರ ಇಡೀ ಒಂದು ವರ್ಷಕಾಲ ಬಾರ್ನಬನು, ಸೌಲನು ಅಲ್ಲಿ ಸಭೆಯವರೊಂದಿಗೆ ಇದ್ದುಕೊಂಡು ಬಹಳ ಜನರಿಗೆ ಬೋಧನೆ ಮಾಡಿದರು. ಶಿಷ್ಯರಿಗೆ ಪ್ರಥಮ ಬಾರಿ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲಿಯೇ.