Acts 11:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಪ್ರವಾದಿಗಳಲ್ಲಿ ‘ಅಗಬ’ ಎಂಬ ಒಬ್ಬನಿದ್ದನು. ಅಗಬನು ಅಂತಿಯೋಕ್ಯದಲ್ಲಿ ಪವಿತ್ರಾತ್ಮನ ಪ್ರೇರಣೆಯಿಂದ, “ಇಡೀ ಪ್ರಪಂಚಕ್ಕೆ ಭೀಕರ ಕ್ಷಾಮ ಬರಲಿದೆ” ಎಂದು ಹೇಳಿದನು. (ಈ ಬರಗಾಲವು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ ಬಂದಿತು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.
Kannada BSI Bible 2016
ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಪವಿತ್ರಾತ್ಮ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು;
Kannada Bible (KNCL) BSI 2016
ಅವರಲ್ಲಿ ಅಗಬ ಎಂಬವನು ಒಬ್ಬನು. ಇವನು ಪವಿತ್ರಾತ್ಮ ಪ್ರೇರಿತನಾಗಿ ಜಗತ್ತಿನಲ್ಲೆಲ್ಲಾ ಭೀಕರ ಕ್ಷಾಮ ಬರಲಿದೆಯೆಂದು ಮುಂತಿಳಿಸಿದನು. (ಇದು ಬಂದೊದಗಿದುದು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಲ್ಲೊಬ್ಬ ಅಗಬ ಎಂಬವನು ಪವಿತ್ರಾತ್ಮ ಪ್ರೇರಿತನಾಗಿ ಎದ್ದು ನಿಂತುಕೊಂಡು ಲೋಕಕ್ಕೆಲ್ಲಾ ಭೀಕರ ಕ್ಷಾಮ ಬರುವುದೆಂದು ತಿಳಿಸಿದನು. ಇದು ಕ್ಲೌದ್ಯನ ಆಳ್ವಿಕೆಯಲ್ಲಿ ಸಂಭವಿಸಿತು.