Acts 11:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜುದೇಯದಲ್ಲಿರುವ ಸಹೋದರ ಸಹೋದರಿಯರಿಗೆ ಸಹಾಯಮಾಡಲು ವಿಶ್ವಾಸಿಗಳು ನಿರ್ಧರಿಸಿದರು. ವಿಶ್ವಾಸಿಗಳಲ್ಲಿ ಪ್ರತಿಯೊಬ್ಬರೂ ತಮ್ಮಿಂದಾದಷ್ಟನ್ನು ಅವರಿಗೆ ಕಳುಹಿಸಿಕೊಡಲು ಯೋಜನೆ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.
Kannada BSI Bible 2016
ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರು ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮ ತಮ್ಮ ಶಕ್ತ್ಯನುಸಾರ ದ್ರವ್ಯ ಸಹಾಯಮಾಡಬೇಕೆಂದು ನಿಶ್ಚಯಿಸಿಕೊಂಡರು.
Kannada Bible (KNCL) BSI 2016
ಆಗ ಭಕ್ತರಲ್ಲಿ ಪ್ರತಿಯೊಬ್ಬರು ತಮ್ಮ ಶಕ್ತಿಗನುಸಾರ ಜುದೇಯದಲ್ಲಿ ವಾಸಿಸುತ್ತಿದ್ದ ಭಕ್ತಾದಿಗಳಿಗೆ ನೆರವು ನೀಡಲು ನಿರ್ಧರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೂದಾಯದಲ್ಲಿ ವಾಸಿಸುತ್ತಿದ್ದ ಸಹೋದರರಿಗೆ ಸಹಾಯ ಒದಗಿಸಲು ಅನುಕೂಲಸ್ಥರಾದ ಶಿಷ್ಯರು ತಮ್ಮ ಶಕ್ತ್ಯಾನುಸಾರ ಕೊಡಲು ನಿರ್ಧರಿಸಿದರು.