Acts 11:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೇತ್ರನು ಅವರಿಗೆ, “ನಾನು ಜೊಪ್ಪ ಪಟ್ಟಣದಲ್ಲಿದ್ದೆನು. ನಾನು ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು. ಆ ದರ್ಶನದಲ್ಲಿ, ಆಕಾಶದಿಂದ ಇಳಿದುಬರುತ್ತಿರುವ ಒಂದು ವಸ್ತುವನ್ನು ಕಂಡೆನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗವನ್ನು ಕಟ್ಟಿ ಭೂಮಿಗೆ ಇಳಿಯಬಿಡಲಾಗಿತ್ತು. ಅದು ಇಳಿದು ಬಂದು ನನ್ನ ಸಮೀಪದಲ್ಲೇ ನಿಂತುಕೊಂಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಳಿದ್ದೇನಂದರೆ; “ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನೆಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು.
Kannada BSI Bible 2016
ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಿದ್ದಾಗ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು; ಅದೇನಂದರೆ ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಇಳಿಸಲ್ಪಟ್ಟು ನಾನಿದ್ದಲ್ಲಿಗೆ ಬಂತು.
Kannada Bible (KNCL) BSI 2016
“ಜೊಪ್ಪ ಪಟ್ಟಣದಲ್ಲಿ ನಾನು ಧ್ಯಾನಪರವಶನಾಗಿದ್ದಾಗ ದರ್ಶನವೊಂದನ್ನು ಕಂಡೆ. ಸ್ವರ್ಗದಿಂದ ದೊಡ್ಡ ದುಪ್ಪಟಿಯಂಥ ವಸ್ತು ಒಂದು ಕೆಳಕ್ಕೆ ಇಳಿಯಿತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಕೆಳಕ್ಕೆ ಇಳಿಬಿಡಲಾಗಿತ್ತು. ಅದು ಬಂದು ನನ್ನ ಪಕ್ಕದಲ್ಲೇ ನಿಂತಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿದ್ದೆನು. ಆಗ ನಾನು ಧ್ಯಾನಪರವಶನಾಗಿ ಒಂದು ದರ್ಶನವನ್ನು ಕಂಡೆನು. ನಾಲ್ಕು ಮೂಲೆಗಳನ್ನು ಹಿಡಿದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಪರಲೋಕದಿಂದ ಕೆಳಗೆ ಇಳಿದು ನಾನಿದ್ದಲ್ಲಿಗೆ ಬರುವುದನ್ನು ಕಂಡೆನು.