Acts 11:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಅದರೊಳಗೆ ನೋಡಿದೆನು. ಅದರಲ್ಲಿ ಪಶುಗಳೂ ಕ್ರೂರಪ್ರಾಣಿಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಇದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇನೆಂದು ತಿಳಿದುಕೊಳ್ಳುವುದಕ್ಕೆ ನಾನು ಅದನ್ನು ಚೆನ್ನಾಗಿ ನೋಡಿದಾಗ, ಭೂಮಿಯ ಮೇಲಿರುವ ಎಲ್ಲಾ ಪ್ರಾಣಿಗಳು, ಕಾಡುಮೃಗಳು, ಹರಿದಾಡುವ ಕ್ರಿಮಿಕೀಟಗಳನ್ನೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳನ್ನೂ ಕಂಡೆನು.
Kannada BSI Bible 2016
ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೊಡಿದಾಗ ಭೂಮಿಯ ಮೇಲಿರುವ ನಾಲ್ಕು ಕಾಲು ಗಳುಳ್ಳ ಪಶುಗಳನ್ನೂ ಕಾಡು ಮೃಗಗಳನ್ನೂ ಹರಿ ದಾಡುವ ಕ್ರಿಮಿಕೀಟಗಳನ್ನೂ ಆಕಾಶದ ಪಕ್ಷಿಗಳನ್ನೂ ಕಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೋಡಿದಾಗ ನೆಲದ ಮೇಲೆ ತಿರುಗಾಡುವ ಪಶು ಮೃಗ ಕ್ರಿವಿುಕೀಟಗಳನ್ನೂ ಅಂತರಿಕ್ಷದಲ್ಲಿ ಹಾರಾಡುವ ಹಕ್ಕಿಗಳನ್ನೂ ಕಂಡೆನು.
Kannada Bible (KNCL) BSI 2016
ಅದನ್ನು ಗಮನಿಸಿ ನೋಡಿದಾಗ ಅದರಲ್ಲಿ ಪ್ರಾಣಿಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಕಂಡುಬಂದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅದರೊಳಗೆ ನೋಡಲು ಅದರಲ್ಲಿ ಭೂಲೋಕದ ಮೇಲೆ ತಿರುಗಾಡುವ ಪ್ರಾಣಿಗಳೂ ಕಾಡು ಮೃಗಗಳೂ ಕ್ರಿಮಿಕೀಟಗಳೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳೂ ಇದ್ದುದನ್ನು ಕಂಡೆನು.