Acts 12:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೇತ್ರನು ಮತ್ತು ದೇವದೂತನು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿಹೋದರು. ಬಳಿಕ ಅವರು ತಮ್ಮನ್ನು ಪಟ್ಟಣದತ್ತ ನಡೆಸುವ ಕಬ್ಬಿಣದ ಬಾಗಿಲಿಗೆ ಬಂದರು. ಆ ಬಾಗಿಲು ಅವರಿಗಾಗಿ ತನ್ನಷ್ಟಕ್ಕೆ ತಾನೇ ತೆರೆದುಕೊಂಡಿತು. ಪೇತ್ರ ಮತ್ತು ಆ ದೇವದೂತನು ಬಾಗಿಲ ಮೂಲಕ ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು. ಆಗ ಇದ್ದಕ್ಕಿದ್ದಂತೆ ಆ ದೇವದೂತನು ಅವನನ್ನು ಬಿಟ್ಟುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.
Kannada BSI Bible 2016
ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.
Kannada Bible (KNCL) BSI 2016
ಅವರು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿದರು. ಪಟ್ಟಣದ ಕಡೆಯಿದ್ದ ಕಬ್ಬಿಣದ ದ್ವಾರದ ಬಳಿ ಬಂದರು. ಆ ದ್ವಾರ ತನ್ನಷ್ಟಕ್ಕೆ ತಾನೇ ತೆರೆಯಿತು. ಅವರು ಹೊರ ನಡೆದರು. ಬೀದಿಯೊಂದರಲ್ಲಿ ಹಾದುಹೋಗುತ್ತಿರಲು ಒಮ್ಮೆಲೆ ದೂತನು ಪೇತ್ರನನ್ನು ಬಿಟ್ಟು ಅದೃಶ್ಯನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣದೊಳಗೆ ನಡೆಸುವ ಕಬ್ಬಿಣದ ದ್ವಾರಕ್ಕೆ ಅವರು ಬಂದರು. ಅದು ತನ್ನಷ್ಟಕ್ಕೆ ತಾನೇ ತೆರೆಯಲು ಅವರು ಅದನ್ನು ದಾಟಿ ಹೊರಗೆ ಬಂದರು. ಒಂದು ಬೀದಿಯನ್ನು ದಾಟುವವರೆಗೆ ನಡೆದು ಬಂದ ನಂತರ ಫಕ್ಕನೆ ದೇವದೂತನು ಪೇತ್ರನನ್ನು ಬಿಟ್ಟುಹೋದನು.