Acts 12:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಡೆದ ಸಂಗತಿಯನ್ನು ಆಗ ಅರಿತುಕೊಂಡ ಪೇತ್ರನು, “ಪ್ರಭುವು ನನ್ನ ಬಳಿಗೆ ತನ್ನ ದೇವದೂತನನ್ನು ನಿಜವಾಗಿಯೂ ಕಳುಹಿಸಿದನೆಂದು ಈಗ ನನಗೆ ತಿಳಿಯಿತು. ಆತನು ನನ್ನನ್ನು ಹೆರೋದನ ಕೈಯಿಂದ ಪಾರುಮಾಡಿದನು. ನನಗೆ ಕೇಡು ಸಂಭವಿಸುತ್ತದೆಯೆಂದು ಯೆಹೂದ್ಯರು ಯೋಚಿಸಿಕೊಂಡಿದ್ದರು. ಆದರೆ ಪ್ರಭುವು ನನ್ನನ್ನು ಆ ಕೇಡಿನಿಂದ ರಕ್ಷಿಸಿದನು” ಎಂದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು.
Kannada BSI Bible 2016
ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪೇತ್ರನು ಎಚ್ಚರವಾಗಿ - ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿದುಬಂದಿದೆ ಅಂದುಕೊಂಡನು.
Kannada Bible (KNCL) BSI 2016
ನಡೆದ ಸಂಗತಿ ಏನೆಂದು ಪೇತ್ರನಿಗೆ ಅರಿವಾದಾಗ ಆತನು, “ನಡೆದುದೆಲ್ಲಾ ಸಾಕ್ಷಾತ್ ಸತ್ಯವೆಂದು ಈಗ ನನಗೆ ತಿಳಿಯಿತು. ಪ್ರಭು ತಮ್ಮ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯರು ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಪಾರುಮಾಡಿದ್ದಾರೆ,” ಎಂದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪೇತ್ರನು ಸಂಪೂರ್ಣವಾಗಿ ಎಚ್ಚರಗೊಂಡು, “ಈಗ ಕರ್ತದೇವರು ತಮ್ಮ ದೂತನನ್ನು ಕಳುಹಿಸಿ ಹೆರೋದನ ಹಿಡಿತದಿಂದಲೂ ಯೆಹೂದ್ಯ ಜನರು ನಿರೀಕ್ಷಿಸುತ್ತಿದ್ದ ಎಲ್ಲಾ ಕೇಡಿನಿಂದಲೂ ನನ್ನನ್ನು ಉಳಿಸಿ ಕಾಪಾಡಿರುವರು ಎಂದು ಈಗ ನನಗೆ ಗೊತ್ತಾಗಿದೆ,” ಎಂದುಕೊಂಡನು.