Acts 12:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೋದೆಯು ಪೇತ್ರನ ಧ್ವನಿಯನ್ನು ಗುರುತಿಸಿದಳು. ಆಕೆಗೆ ತುಂಬಾ ಸಂತೋಷವಾಯಿತು. ಬಾಗಿಲು ತೆರೆಯುವುದನ್ನು ಆಕೆ ಮರೆತು, ನೆರೆದು ಬಂದಿದ್ದ ಜನರ ಬಳಿಗೆ ಓಡಿಹೋಗಿ, “ಪೇತ್ರನು ಬಾಗಿಲ ಬಳಿ ನಿಂತಿದ್ದಾನೆ!” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ಪೇತ್ರನ ಧ್ವನಿಯನ್ನು ಗುರುತುಹಿಡಿದು ಅತಿಯಾದ ಆನಂದದಿಂದ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ; “ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ” ಎಂದು ತಿಳಿಸಿದಳು. ಅವರು ಅವಳಿಗೆ; “ನಿನಗೆ ಹುಚ್ಚು ಹಿಡಿದದೆ” ಎಂದು ಹೇಳಿದರು.
Kannada BSI Bible 2016
ಅವಳು ಪೇತ್ರನ ಧ್ವನಿಯನ್ನು ತಿಳಿದಾಗ ಸಂತೋಷದ ನಿಮಿತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ--ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ಹೇಳಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳು ಪೇತ್ರನ ಧ್ವನಿಯನ್ನು ಗೊತ್ತುಹಿಡಿದು ಸಂತೋಷದ ನಿವಿುತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ - ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ತಿಳಿಸಿದಳು. ಅವರು ಅವಳಿಗೆ - ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು.
Kannada Bible (KNCL) BSI 2016
ಆಕೆ ಪೇತ್ರನ ಸ್ವರವನ್ನು ಗುರುತು ಹಚ್ಚಿದ್ದೇ ಆನಂದಪರವಶಳಾಗಿ ಬಾಗಿಲನ್ನು ಸಹ ತೆರೆಯದೆ ಒಳಕ್ಕೆ ಓಡಿದಳು. ಪೇತ್ರನು ಬಾಗಿಲ ಹೊರಗೆ ನಿಂತಿದ್ದಾನೆಂದು ಒಳಗಿದ್ದವರಿಗೆ ತಿಳಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೇತ್ರನ ಧ್ವನಿಯನ್ನು ಗುರುತಿಸಿ ಸಂತೋಷದಿಂದ ಕೂಡಿದವಳಾಗಿ ಬಾಗಿಲು ತೆರೆಯದೆ ಹಿಂದೆ ಓಡಿಹೋಗಿ, “ಪೇತ್ರನು ಬಾಗಿಲ ಬಳಿಯಲ್ಲಿದ್ದಾನೆ!” ಎಂದು ತಿಳಿಸಿದಳು.