Acts 12:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪೇತ್ರನು ಬಾಗಿಲನ್ನು ತಟ್ಟುತ್ತಲೇ ಇದ್ದನು. ಆ ವಿಶ್ವಾಸಿಗಳು ಬಾಗಿಲನ್ನು ತೆರೆದಾಗ ಅವರು ಪೇತ್ರನನ್ನು ಕಂಡು ವಿಸ್ಮಿತರಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
Kannada BSI Bible 2016
ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
Kannada Bible (KNCL) BSI 2016
ಇತ್ತ ಪೇತ್ರನು ಬಾಗಿಲು ತಟ್ಟುತ್ತಲೇ ಇದ್ದನು. ಕೊನೆಗೆ ಅವರು ಬಂದು ಬಾಗಿಲನ್ನು ತೆರೆದರು. ಪೇತ್ರನನ್ನು ಕಂಡು ಸ್ತಬ್ಧರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಹೋಗಿ ಬಾಗಿಲು ತೆರೆಯಲು ಅವನನ್ನು ಕಂಡು ಅತ್ಯಾಶ್ಚರ್ಯಗೊಂಡರು.