Acts 12:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೇತ್ರನು ಅವರಿಗೆ ಸುಮ್ಮನಿರಬೇಕೆಂದು ಸನ್ನೆ ಮಾಡಿದನು. ಪ್ರಭುವು ತನ್ನನ್ನು ಸೆರೆಮನೆಯಿಂದ ಬಿಡಿಸಿದ ರೀತಿಯನ್ನು ಅವನು ಅವರಿಗೆ ವಿವರಿಸಿ, “ಯಾಕೋಬನಿಗೂ ಮತ್ತು ಸಹೋದರರಿಗೂ ಈ ಸಂಗತಿಯನ್ನು ತಿಳಿಸಿರಿ” ಎಂದು ಹೇಳಿದನು. ಬಳಿಕ ಪೇತ್ರನು ಬೇರೊಂದು ಸ್ಥಳಕ್ಕೆ ಅಲ್ಲಿಂದ ಹೊರಟುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.
Kannada BSI Bible 2016
ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು ಸುಮ್ಮಗಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರರೆಲ್ಲರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.
Kannada Bible (KNCL) BSI 2016
ಪೇತ್ರನು ನಿಶ್ಯಬ್ದರಾಗಿರುವಂತೆ ಅವರಿಗೆ ಕೈಸನ್ನೆ ಮಾಡಿದನು. ಪ್ರಭು ತನ್ನನ್ನು ಹೇಗೆ ಸೆರೆಮನೆಯಿಂದ ಹೊರಗೆ ಕರೆತಂದರೆಂದು ವಿವರಿಸಿದನು. ಈ ವಿಷಯವನ್ನು ಯಕೋಬನಿಗೂ ಇತರ ಸಹೋದರರಿಗೂ ತಿಳಿಸಲು ಹೇಳಿ ಅಲ್ಲಿಂದ ಹೊರಟು ಬೇರೆ ಸ್ಥಳಕ್ಕೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಮ್ಮನಿರಬೇಕೆಂದು ಪೇತ್ರನು ಅವರಿಗೆ ಕೈಸನ್ನೆ ಮಾಡಿ ಕರ್ತದೇವರು ಹೇಗೆ ತನ್ನನ್ನು ಸೆರೆಮನೆಯಿಂದ ಬಿಡಿಸಿ ಹೊರಗೆ ಕರೆದುಕೊಂಡು ಬಂದರು ಎಂಬುದನ್ನು ವಿವರಿಸಿದನು. “ಇದನ್ನು ಯಾಕೋಬನಿಗೆ ಹಾಗೂ ಸಹೋದರರಿಗೆ ತಿಳಿಸಿರಿ,” ಎಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.