Acts 12:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೆರೋದನು ಎಲ್ಲೆಲ್ಲಿ ಹುಡುಕಿದರೂ ಪೇತ್ರನನ್ನು ಕಂಡುಹಿಡಿಯಲಾಗಲಿಲ್ಲ. ಆದ್ದರಿಂದ ಹೆರೋದನು ಕಾವಲುಗಾರರನ್ನು ವಿಚಾರಿಸಿ ಅವರಿಗೇ ಮರಣದಂಡನೆ ವಿಧಿಸಿದನು. ತರುವಾಯ ಹೆರೋದನು ಜುದೇಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಬಂದು ಅಲ್ಲೇ ಸ್ವಲ್ಪಕಾಲ ನೆಲೆಸಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.
Kannada BSI Bible 2016
ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆಮಾಡಿ ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.
Kannada Bible (KNCL) BSI 2016
ಅವನನ್ನು ಹುಡುಕಿತರುವಂತೆ ಹೆರೋದನು ಆಜ್ಞಾಪಿಸಿದನು. ಆದರೆ ಅವನನ್ನು ಕಂಡುಹಿಡಿಯಲು ಅವರಿಂದಾಗಲಿಲ್ಲ. ಆದುದರಿಂದ ಪಹರೆಯವರನ್ನೇ ವಿಚಾರಣೆಗೆ ಗುರಿಮಾಡಿ ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಇದಾದ ಬಳಿಕ ಹೆರೋದನು ಜುದೇಯದಿಂದ ಹೊರಟು ಕೊಂಚಕಾಲ ಸೆಜರೇಯದಲ್ಲಿ ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆರೋದನು ಅವನನ್ನು ಹುಡುಕಿ ಕಾಣದೆ ಹೋದದ್ದರಿಂದ ಕಾವಲುಗಾರರನ್ನು ವಿಚಾರಿಸಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಅನಂತರ ಹೆರೋದನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಸ್ವಲ್ಪ ಸಮಯ ಇದ್ದನು.