Acts 12:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಟೈರ್ ಮತ್ತು ಸಿದೋನ್ ಪಟ್ಟಣಗಳ ಜನರ ಮೇಲೆ ಹೆರೋದನು ಬಹು ಕೋಪಗೊಂಡಿದ್ದನು. ಆ ಜನರೆಲ್ಲರೂ ಹೆರೋದನನ್ನು ಭೇಟಿಯಾಗಲು ಒಟ್ಟಾಗಿ ಹೋದರು. ಅವರು ಬ್ಲಾಸ್ತನನ್ನು ತಮ್ಮ ಕಡೆಗೆ ಒಲಿಸಿಕೊಂಡರು. ಬ್ಲಾಸ್ತನು ರಾಜನ ವೈಯಕ್ತಿಕ ಸೇವಕನಾಗಿದ್ದನು. ಆ ಜನರು ತಮ್ಮೊಂದಿಗೆ ಶಾಂತಿಸಂಧಾನ ಮಾಡಿಕೊಳ್ಳಬೇಕೆಂದು ಹೆರೋದನನ್ನು ಕೇಳಿಕೊಂಡರು. ಯಾಕೆಂದರೆ ಅವರ ನಾಡಿಗೆ ಹೆರೋದನ ನಾಡಿನಿಂದ ಆಹಾರವನ್ನು ತರಿಸಿಕೊಳ್ಳಬೇಕಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.
Kannada BSI Bible 2016
ತೂರ್‌ ಸೀದೋನ್‌ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
Kannada BSI JV (ಕನ್ನಡ ಸತ್ಯವೇದವು J.V. (BSI))
ತೂರ್ ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವದನ್ನು ನೋಡಿ ಒಂದೇ ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಬೇಕೆಂದು ಅರಸನನ್ನು ಬೇಡಿಕೊಂಡರು. ಯಾಕಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.
Kannada Bible (KNCL) BSI 2016
ಹೆರೋದನು ಟೈರ್ ಮತ್ತು ಸಿದೋನಿನ ಜನರ ಮೇಲೆ ಕಡುಕೋಪಗೊಂಡಿದ್ದನು. ಅವರೆಲ್ಲರೂ ಒಟ್ಟಾಗಿ ಅವನನ್ನು ಸಂದರ್ಶಿಸಲು ಹೋದರು. ಮೊದಲು ಅರಮನೆಯ ಮೇಲ್ವಿಚಾರಕನಾದ ಬ್ಲಾಸ್ತನ ಮನಸ್ಸನ್ನು ತಮ್ಮ ಕಡೆ ಒಲಿಸಿಕೊಂಡರು. ಅನಂತರ ಅವರು ಹೆರೋದನೊಡನೆ ಸಂಧಾನಮಾಡಿಕೊಳ್ಳಲು ಯತ್ನಿಸಿದರು. ಏಕೆಂದರೆ, ಅವರು ದವಸಧಾನ್ಯಗಳಿಗಾಗಿ ಹೆರೋದನ ನಾಡನ್ನು ಅವಲಂಬಿಸಬೇಕಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಟೈರ್ ಮತ್ತು ಸೀದೋನಿನ ಜನರೊಂದಿಗೆ ಬಹು ಕೋಪವುಳ್ಳವನಾಗಿದ್ದನು. ಈಗ ಅವರೆಲ್ಲರೂ ಒಂದಾಗಿ ಅವನ ಬಳಿ ಬಂದು ಅರಸನ ನಂಬಿಗಸ್ತ ಸೇವಕನಾದ ಬ್ಲಾಸ್ತ ಎಂಬುವನ ಬೆಂಬಲವನ್ನು ಪಡೆದುಕೊಂಡು, ಸಂಧಾನ ಮಾಡಿಕೊಳ್ಳಲು ಅರಸನನ್ನು ಕೇಳಿಕೊಂಡರು. ಏಕೆಂದರೆ ಅವರ ಆಹಾರ ಧಾನ್ಯಗಳು ಅರಸನ ಸೀಮೆಯಿಂದ ಬರುತ್ತಿದ್ದವು.