Acts 12:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರನ್ನು ಸಂಧಿಸುವುದಕ್ಕಾಗಿ ಹೆರೋದನು ದಿನವೊಂದನ್ನು ಗೊತ್ತುಮಾಡಿದನು. ಅಂದು ಹೆರೋದನು ಸುಂದರವಾದ ರಾಜವಸ್ತ್ರವನ್ನು ಧರಿಸಿಕೊಂಡಿದ್ದನು. ಅವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಜನರಿಗೆ ಭಾಷಣ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.
Kannada BSI Bible 2016
ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ರಾಜಾಸನದ ಮೇಲೆ ಕೂತು ಅವರಿಗೆ ಉಪನ್ಯಾಸ ಮಾಡಿದನು.
Kannada Bible (KNCL) BSI 2016
ನಿಯಮಿತ ದಿನದಂದು ಹೆರೋದನು ರಾಜಪೋಷಾಕನ್ನು ಧರಿಸಿಕೊಂಡು ಜನರನ್ನುದ್ದೇಶಿಸಿ ಭಾಷಣಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೇಮಕವಾದ ದಿನ ಹೆರೋದನು ತನ್ನ ರಾಜವಸ್ತ್ರಗಳನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತುಕೊಂಡು ಜನರನ್ನುದ್ದೇಶಿಸಿ ಬಹಿರಂಗ ಭಾಷಣ ಮಾಡಿದನು.