Acts 12:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ್ಯರು ಇದನ್ನು ಮೆಚ್ಚಿಕೊಂಡರೆಂಬುದು ಹೆರೋದನಿಗೆ ತಿಳಿಯಿತು. ಆದ್ದರಿಂದ ಅವನು ಪೇತ್ರನನ್ನು ಬಂಧಿಸಿ (ಇದು ನಡೆದದ್ದು ಯೆಹೂದ್ಯರ ಪಸ್ಕಹಬ್ಬದ ಕಾಲದಲ್ಲಿ) ಸೆರೆಮನೆಗೆ ಹಾಕಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.
Kannada BSI Bible 2016
ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು).
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ನೋಡಿ ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಹಿಡಿಸಿದನು. ಆ ಕಾಲದಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.
Kannada Bible (KNCL) BSI 2016
ಇದರಿಂದ ಯೆಹೂದ್ಯರಿಗೆ ಮೆಚ್ಚುಗೆಯಾಯಿತೆಂದು ತಿಳಿದು ಪೇತ್ರನನ್ನು ಬಂಧಿಸಿದನು. (ಆಗ ಹುಳಿರಹಿತ ರೊಟ್ಟಿಯ ಹಬ್ಬ ನಡೆಯುತ್ತಿತ್ತು).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರಿಂದ ಯೆಹೂದ್ಯರಿಗೆ ಮೆಚ್ಚಿಕೆಯಾಯಿತೆಂದು ತಿಳಿದಾಗ, ಅವನು ಪೇತ್ರನನ್ನು ಬಂಧಿಸಿದನು. ಇದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಸಮಯದಲ್ಲಿ ನಡೆಯಿತು.