Acts 12:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹದಿನಾರು ಮಂದಿ ಸಿಪಾಯಿಗಳು ಪೇತ್ರನನ್ನು ಕಾಯುತ್ತಿದ್ದರು. ಪಸ್ಕಹಬ್ಬದ ಕಾಲ ಮುಗಿದೊಡನೆ ಪೇತ್ರನನ್ನು ಜನರ ಮುಂದೆ ನಿಲ್ಲಿಸಬೇಕೆಂದಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.
Kannada BSI Bible 2016
ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಪಸ್ಕಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.
Kannada Bible (KNCL) BSI 2016
ಪೇತ್ರನನ್ನು ಬಂಧಿಸಿದ ಮೇಲೆ ಸೆರೆಮನೆಯಲ್ಲಿಟ್ಟು ಅವನನ್ನು ಕಾಯಲು ನಾಲ್ಕು ನಾಲ್ಕು ಸೈನಿಕರಿದ್ದ ಚತುರ್ದಳಕ್ಕೆ ವಹಿಸಿದನು. ಪಾಸ್ಕಹಬ್ಬದ ನಂತರ ಪೇತ್ರನನ್ನು ಬಹಿರಂಗ ವಿಚಾರಣೆಗೆ ಗುರಿಪಡಿಸಲು ಉದ್ದೇಶಿಸಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೇತ್ರನನ್ನು ಬಂಧಿಸಿದ ನಂತರ ಅವನನ್ನು ಸೆರೆಮನೆಯಲ್ಲಿ ಹಾಕಿದನು. ಪೇತ್ರನನ್ನು ಕಾಯಲು ನಾಲ್ಕು ದಳಗಳನ್ನು ನೇಮಿಸಿದನು. ಒಂದೊಂದು ದಳದಲ್ಲಿಯೂ ನಾಲ್ಕು ಸಿಪಾಯಿಗಳಿದ್ದರು. ಪಸ್ಕಹಬ್ಬ ಮುಗಿದ ತರುವಾಯ ಪೇತ್ರನನ್ನು ಬಹಿರಂಗ ವಿಚಾರಣೆಗೆ ತರಬೇಕೆಂದು ಉದ್ದೇಶಿಸಿದ್ದನು.