Acts 12:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೇತ್ರನು ಇಬ್ಬರು ಸೈನಿಕರ ಮಧ್ಯೆ ನಿದ್ರೆಮಾಡುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಅನೇಕ ಸೈನಿಕರು ಸೆರೆಮನೆಯ ಬಾಗಿಲನ್ನು ಕಾಯುತ್ತಿದ್ದರು. ಆಗ ರಾತ್ರಿಯಾಗಿತ್ತು. ಮರುದಿನ ಪೇತ್ರನನ್ನು ಜನರ ಮುಂದೆ ತರಬೇಕೆಂದು ಹೆರೋದನು ಯೋಚಿಸಿಕೊಂಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.
Kannada BSI Bible 2016
ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿವಸದ ಹಿಂದಿನ ರಾತ್ರಿಯಲ್ಲಿ ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ ಇಬ್ಬರು ಸಿಪಾಯಿಗಳ ನಡುವೆ ನಿದ್ದೆ ಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.
Kannada Bible (KNCL) BSI 2016
ಹೆರೋದನು ಪೇತ್ರನನ್ನು ಜನರ ಮುಂದೆ ತರಬೇಕೆಂದಿದ್ದ ಹಿಂದಿನ ರಾತ್ರಿ ಅದು. ಪೇತ್ರನು ಇಬ್ಬರು ಸೈನಿಕರ ನಡುವೆ ನಿದ್ರಿಸುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಪಹರೆಯವರು ಸೆರೆಮನೆಯ ದ್ವಾರದಲ್ಲಿ ಕಾವಲಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆರೋದನು ಅವನನ್ನು ವಿಚಾರಣೆಗೆ ತರಲಿಕ್ಕಿದ್ದ ದಿನದ ಹಿಂದಿನ ರಾತ್ರಿ ಪೇತ್ರನು ಸರಪಣಿಗಳಿಂದ ಬಂಧಿಸಲಾಗಿ ಇಬ್ಬರು ಸಿಪಾಯಿಗಳ ಮಧ್ಯೆ ನಿದ್ರಿಸುತ್ತಿದ್ದನು. ಕಾವಲುಗಾರರು ದ್ವಾರದ ಬಳಿಯಲ್ಲಿ ಕಾಯುತ್ತಿದ್ದರು.