Acts 12:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದ್ದಕ್ಕಿದ್ದಂತೆ, ಪ್ರಭುವಿನ ದೂತನೊಬ್ಬನು ಅಲ್ಲಿ ನಿಂತುಕೊಂಡನು. ಬೆಳಕು ಕೋಣೆಯಲ್ಲಿ ಪ್ರಕಾಶಿಸಿತು. ದೇವದೂತನು ಪೇತ್ರನ ಪಕ್ಕೆಯನ್ನು ಮುಟ್ಟಿ ಅವನನ್ನು ಎಬ್ಬಿಸಿ, “ಬೇಗನೆ ಎದ್ದೇಳು!” ಎಂದನು. ಆ ಕೂಡಲೆ ಸರಪಣಿಗಳು ಪೇತ್ರನ ಕೈಗಳಿಂದ ಕಳಚಿಬಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.
Kannada BSI Bible 2016
ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು. ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ - ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.
Kannada Bible (KNCL) BSI 2016
ಫಕ್ಕನೆ ದೇವದೂತನೊಬ್ಬನು ಕಾಣಿಸಿಕೊಂಡನು. ಆ ಕೋಣೆಯೆಲ್ಲಾ ಪ್ರಕಾಶಮಯವಾಯಿತು. ದೂತನು ಪೇತ್ರನ ಭುಜವನ್ನು ತಟ್ಟಿ, ಎಬ್ಬಿಸಿ, “ಬೇಗನೆ ಏಳು,” ಎಂದನು. ಆ ಕ್ಷಣವೇ ಪೇತ್ರನ ಕೈಗಳಿಗೆ ಕಟ್ಟಿದ್ದ ಸರಪಣಿಗಳು ಕಳಚಿಬಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಕ್ಕನೆ ದೇವದೂತನೊಬ್ಬನು ಪ್ರತ್ಯಕ್ಷನಾಗಲು ಕೋಣೆಯೆಲ್ಲಾ ಪ್ರಕಾಶಮಯವಾಯಿತು. ಅವನು ಪೇತ್ರನನ್ನು ತಟ್ಟಿ ಎಬ್ಬಿಸಿ, “ಬೇಗ ಎದ್ದೇಳು!” ಎಂದನು. ಪೇತ್ರನ ಕೈಗಳಿಗೆ ಬಂಧಿಸಿದ್ದ ಸರಪಣಿಗಳು ಕಳಚಿಬಿದ್ದವು.
Recommended Reading