Acts 12:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವದೂತನು ಪೇತ್ರನಿಗೆ, “ಬಟ್ಟೆ ಧರಿಸಿಕೊ, ಪಾದರಕ್ಷೆಗಳನ್ನು ಮೆಟ್ಟಿಕೊ” ಎಂದು ಹೇಳಿದನು. ಅಂತೆಯೇ ಪೇತ್ರನು ಮಾಡಿದನು. ಬಳಿಕ ದೇವದೂತನು, “ನಿನ್ನ ಮೇಲಂಗಿಯನ್ನು ಧರಿಸಿಕೊಂಡು ನನ್ನನ್ನು ಹಿಂಬಾಲಿಸು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೂತನು ಅವನಿಗೆ; “ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ” ಎಂದು ಹೇಳಲು, ಅವನು ಹಾಗೆಯೇ ಮಾಡಿದನು. “ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ” ಅಂದನು.
Kannada BSI Bible 2016
ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೂತನು ಅವನಿಗೆ - ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೇ ಮಾಡಿದನು. ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು.
Kannada Bible (KNCL) BSI 2016
ದೂತನು ಅವನಿಗೆ, “ಬಟ್ಟೆಯನ್ನು ತೊಟ್ಟುಕೋ, ಪಾದರಕ್ಷೆಯನ್ನು ಮೆಟ್ಟಿಕೋ,” ಎಂದನು. ಪೇತ್ರನು ಹಾಗೆಯೇ ಮಾಡಿದನು. ಅನಂತರ ದೂತನು, “ನಿನ್ನ ಮೇಲುಹೊದಿಕೆಯನ್ನು ಹೊದ್ದುಕೊಂಡು ನನ್ನ ಜೊತೆ ಬಾ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿನ್ನ ಬಟ್ಟೆಗಳನ್ನೂ ಮೆಟ್ಟುಗಳನ್ನೂ ಧರಿಸಿಕೋ,” ಎಂದು ದೇವದೂತನು ಅವನಿಗೆ ಹೇಳಲು, ಪೇತ್ರನು ಅದರಂತೆ ಮಾಡಿದನು. “ನಿನ್ನ ನಿಲುವಂಗಿಯನ್ನು ಸುತ್ತಿಕೊಂಡು ನನ್ನನ್ನು ಹಿಂಬಾಲಿಸು,” ಎಂದು ದೇವದೂತನು ಹೇಳಿದನು.