Acts 12:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವದೂತನು ಹೊರಗೆ ಹೋದನು. ಪೇತ್ರನು ಅವನನ್ನು ಹಿಂಬಾಲಿಸಿದನು. ದೇವದೂತನು ನಿಜವಾಗಿಯೂ ಹೀಗೆ ಮಾಡುತ್ತಿದ್ದಾನೆಂಬುದು ಪೇತ್ರನಿಗೆ ತಿಳಿದಿರಲಿಲ್ಲ. ತಾನು ಕನಸು ಕಾಣುತ್ತಿರಬಹುದೆಂದು ಅವನು ಯೋಚಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ, ದೂತನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ತಿಳಿದನು.
Kannada BSI Bible 2016
ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ ಅವನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ದರ್ಶನವೆಂದು ನೆನಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ ದೂತನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ನೆನಸಿದನು.
Kannada Bible (KNCL) BSI 2016
ಪೇತ್ರನು ಸೆರೆಮನೆಯ ಹೊರಕ್ಕೆ ಅವನನ್ನು ಹಿಂಬಾಲಿಸಿ ಹೋದನು. ಅಷ್ಟಾದರೂ ದೂತನು ಮಾಡುತ್ತಿರುವುದು ನಿಜವೆಂದು ಅವನಿಗೆ ಅರಿವಾಗಲಿಲ್ಲ; ತನಗೇನೋ ದರ್ಶನವಾಗುತ್ತಿದೆಯೆಂದೆ ಭಾವಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೇತ್ರನು ಸೆರೆಮನೆಯಿಂದ ಹೊರಗೆ ಅವನನ್ನು ಹಿಂಬಾಲಿಸಿ ಹೊರಟನು. ದೇವದೂತನು ಮಾಡುತ್ತಿರುವುದು ನಿಜವಾಗಿಯೂ ನಡೆಯುತ್ತಿದೆ ಎಂಬುದು ಅವನಿಗೆ ತಿಳಿಯಲಿಲ್ಲ. ತಾನು ದರ್ಶನ ಕಾಣುತ್ತಿರುವೆನೋ ಎಂದು ಭಾವಿಸಿದನು.