Acts 13:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.
Kannada BSI Bible 2016
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರಂದರೆ - ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಉಪರಾಜನಾದ ಹೆರೋದನ ಸಾಕತಮ್ಮನಾದ ಮೆನಹೇನ, ಸೌಲ ಇವರೇ.
Kannada Bible (KNCL) BSI 2016
ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂತಿಯೋಕ್ಯದ ಸಭೆಯಲ್ಲಿ, ಪ್ರವಾದಿಗಳೂ ಬೋಧಕರೂ ಇದ್ದರು. ಅವರು ಯಾರೆಂದರೆ ಬಾರ್ನಬನು, ನೀಗರ ಎಂದು ಕರೆಯಲಾಗುತ್ತಿದ್ದ ಸಿಮೆಯೋನ, ಕುರೇನೆದ ಲೂಕ್ಯ, ಚತುರಾಧಿಪತಿ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಮುಂತಾದವರೇ.