Acts 13:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.
Kannada BSI Bible 2016
ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮಶಾಸ್ತ್ರವು ಪ್ರವಾದಿಗಳ ಗ್ರಂಥವು ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ಯಜಮಾನರು - ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿ ಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
Kannada Bible (KNCL) BSI 2016
ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳಿಂದ ವಾಚನವಾದ ನಂತರ ಪ್ರಾರ್ಥನಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಉಪಯುಕ್ತವಾದ ಹಿತೋಕ್ತಿ ಏನಾದರೂ ಇದ್ದರೆ ಉಪದೇಶಮಾಡಿ,” ಎಂದು ಕೇಳಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಯಮ ಮತ್ತು ಪ್ರವಾದಿಗಳ ಗ್ರಂಥವು ಪಾರಾಯಣವಾದ ತರುವಾಯ, ಸಭಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಪ್ರೋತ್ಸಾಹ ಕೊಡುವ ಸಂದೇಶ ನಿಮ್ಮಲ್ಲಿದ್ದರೆ, ಮಾತನಾಡಿರಿ,” ಎಂದು ಕೇಳಿಕೊಂಡರು.