Acts 13:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರ ದೇವರು ನಮ್ಮ ಪಿತೃಗಳನ್ನು ಆರಿಸಿಕೊಂಡನು. ಈಜಿಪ್ಟಿನಲ್ಲಿ ಪ್ರವಾಸಿಗರಾಗಿ ವಾಸಿಸುತ್ತಿದ್ದ ತನ್ನ ಜನರಿಗೆ ದೇವರು ಸಹಾಯಮಾಡಿ ಅಭಿವೃದ್ಧಿಪಡಿಸಿದನು. ದೇವರು ತನ್ನ ಮಹಾಶಕ್ತಿಯಿಂದ ಅವರನ್ನು ಆ ದೇಶದೊಳಗಿಂದ ಬರಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.
Kannada BSI Bible 2016
ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಭಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃಗಳನ್ನು ಆರಿಸಿಕೊಂಡು ನಮ್ಮ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿದನು.
Kannada Bible (KNCL) BSI 2016
ಇಸ್ರಯೇಲ್ ಜನರ ದೇವರು ನಮ್ಮ ಪೂರ್ವಜರನ್ನು ಆರಿಸಿಕೊಂಡರು. ಈಜಿಪ್ಟಿನಲ್ಲಿ ಪರಕೀಯರಾಗಿ ವಾಸಿಸುತ್ತಿದ್ದ ನಮ್ಮ ಜನರನ್ನು ಪ್ರಬಲ ಜನಾಂಗವನ್ನಾಗಿ ಮಾಡಿದರು. ತಮ್ಮ ಮಹಾಶಕ್ತಿಯನ್ನು ಪ್ರಯೋಗಿಸಿ ಅವರನ್ನು ಈಜಿಪ್ಟಿನಿಂದ ಹೊರಗೆ ತಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃಗಳನ್ನು ಆಯ್ದುಕೊಂಡರು; ಈಜಿಪ್ಟಿನಲ್ಲಿ ನಮ್ಮ ಜನರು ವಾಸಿಸುತ್ತಿದ್ದಾಗ; ಅವರನ್ನು ಪ್ರಬಲರನ್ನಾಗಿ ಮಾಡಿ ತಮ್ಮ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಅವರನ್ನು ಬಿಡಿಸಿ ಕರೆತಂದರು;