Acts 13:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವೆಲ್ಲಾ ಸುಮಾರು ನಾನೂರ ಐವತ್ತು ವರ್ಷಗಳ ಅವಧಿಯಲ್ಲಿ ನಡೆದವು. “ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದವರೆಗೆ ದೇವರು ನಮ್ಮ ಜನರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.
Kannada BSI Bible 2016
ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಷ್ಟರೊಳಗೆ ಸುಮಾರು ನಾನೂರೈವತ್ತು ವರುಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.
Kannada Bible (KNCL) BSI 2016
ಹೀಗೆ ಸುಮಾರು ನಾನೂರ ಐವತ್ತು ವರ್ಷಗಳು ಕಳೆದವು. ಅನಂತರ ಪ್ರವಾದಿ ಸಮುವೇಲನ ಕಾಲದವರೆಗೆ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಕಳುಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಕ್ಕೆ ನಾನೂರ ಐವತ್ತು ವರ್ಷಗಳ ಕಾಲ ಹಿಡಿಯಿತು. “ಇದಾದನಂತರ, ದೇವರು ಅವರಿಗೆ ಪ್ರವಾದಿ ಸಮುಯೇಲನ ಸಮಯದವರೆಗೆ ನ್ಯಾಯಸ್ಥಾಪಕರನ್ನು ದಯಪಾಲಿಸಿದರು.