Acts 13:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಜನರು ತಮಗೆ ರಾಜನು ಬೇಕೆಂದು ಕೇಳಿಕೊಂಡರು. ದೇವರು ಅವರಿಗೆ ಕೀಷನ ಮಗನಾದ ಸೌಲನನ್ನು ಕೊಟ್ಟನು. ಸೌಲನು ಬೆನ್ಯಾಮಿನ್ ಕುಲದವನು. ಅವನು ನಲವತ್ತು ವರ್ಷಗಳ ಕಾಲ ರಾಜನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರ್ಷ ಆಳಿದನು.
Kannada BSI Bible 2016
ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ಕೊಟ್ಟನು. ಅವನು ನಾಲ್ವತ್ತು ವರುಷ ಆಳಿದನು.
Kannada Bible (KNCL) BSI 2016
ತಮಗೆ ಅರಸನು ಬೇಕೆಂದು ಕೇಳಿಕೊಂಡಾಗ ದೇವರು ಬೆನ್ಯಾಮೀನ ಗೋತ್ರದ ಕೀಷನ ಮಗ ಸೌಲನನ್ನು ನೇಮಿಸಿದರು. ಇವನು ನಾಲ್ವತ್ತು ವರ್ಷ ಆಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಜನರು ಒಬ್ಬ ಅರಸನು ತಮಗೆ ಬೇಕೆಂದು ಕೇಳಿಕೊಳ್ಳಲು, ದೇವರು ಬೆನ್ಯಾಮೀನ್ ಗೋತ್ರದ ಕೀಷನ ಮಗ ಸೌಲನನ್ನು ಅವರಿಗೆ ಕೊಟ್ಟರು. ಇವನು ನಲವತ್ತು ವರ್ಷ ಆಳ್ವಿಕೆ ಮಾಡಿದನು.