Acts 13:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಸೌಲನನ್ನು ತೆಗೆದುಹಾಕಿದ ಮೇಲೆ ದಾವೀದನನ್ನು ಅವರ ರಾಜನನ್ನಾಗಿ ಮಾಡಿದನು. ‘ಇಷಯನ ಮಗನಾದ ದಾವೀದನು ನನಗೆ ಮೆಚ್ಚಿಗೆಯಾದವನು. ಅವನು ನನ್ನ ಅಪೇಕ್ಷೆಗೆ ತಕ್ಕಂತೆ ಕಾರ್ಯಗಳನ್ನು ಮಾಡುತ್ತಾನೆ’ ಎಂದು ದೇವರು ದಾವೀದನ ಬಗ್ಗೆ ಹೇಳಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.
Kannada BSI Bible 2016
ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ಮಾಡಿ - ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನಗೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟವನ್ನೆಲ್ಲಾ ನೆರವೇರಿಸುವನು ಎಂಬದಾಗಿ ಅವನ ವಿಷಯದಲ್ಲಿ ಸಾಕ್ಷಿಹೇಳಿದನು.
Kannada Bible (KNCL) BSI 2016
ಅನಂತರ ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, “ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು,” ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಸೌಲನನ್ನು ಅರಸುತನದಿಂದ ತೆಗೆದುಹಾಕಿ, ದೇವರು ದಾವೀದನನ್ನು ಅವರ ಅರಸನನ್ನಾಗಿ ಎಬ್ಬಿಸಿದರು. ಇವನನ್ನು ಕುರಿತು, ‘ಇಷಯನ ಮಗ ದಾವೀದನು ನನಗೆ ಸಿಕ್ಕಿದನು. ನನ್ನ ಹೃದಯಕ್ಕೆ ತಕ್ಕಂಥ ಮನುಷ್ಯನು; ಇವನು ನಾನು ಅಪೇಕ್ಷಿಸುವುದೆಲ್ಲವನ್ನೂ ಮಾಡುವನು,’ ಎಂದು ದೇವರು ತಾವೇ ಸಾಕ್ಷಿಕೊಟ್ಟರು.