Acts 13:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಬರುವುದಕ್ಕಿಂತ ಮೊದಲು (ಸ್ನಾನಿಕ) ಯೋಹಾನನು ಯೆಹೂದ್ಯ ಜನರಿಗೆಲಾ,್ಲ ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ’ ಎಂದು ಬೋಧಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.
Kannada BSI Bible 2016
ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ರಕ್ಷಕನೇ ಯೇಸು. ಆತನ ಆಗಮನಕ್ಕೆ ಮುಂಚೆ ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ - ನೀವು ದೇವರ ಕಡೆಗೆ ತಿರುಗಿಕೊಂಡು ಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿದನು.
Kannada Bible (KNCL) BSI 2016
ಇವರ ಆಗಮನಕ್ಕೆ ಸಿದ್ಧತೆಯಾಗಿ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿ ಸ್ನಾನದೀಕ್ಷೆಯನ್ನು ಪಡೆಯಬೇಕೆಂದು ಯೊವಾನ್ನನು ಇಸ್ರಯೇಲಿನ ಎಲ್ಲ ಜನರಿಗೆ ಸಾರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಬರುವ ಮೊದಲು, ಸ್ನಾನಿಕ ಯೋಹಾನನು ಎಲ್ಲಾ ಇಸ್ರಾಯೇಲರಿಗೆ ಪಶ್ಚಾತ್ತಾಪ ಮತ್ತು ದೀಕ್ಷಾಸ್ನಾನದ ಬಗ್ಗೆ ಸಾರಿದನು.