Acts 13:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ನಾನು ಯಾರೆಂದು ನೀವು ಯೋಚಿಸುತ್ತೀರಿ? ನಾನು ಕ್ರಿಸ್ತನಲ್ಲ. ಆತನು ನನ್ನ ತರುವಾಯ ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ’ ಎಂದು ಯೋಹಾನನು ತನ್ನ ಕಾರ್ಯವನ್ನು ಮಾಡಿ ಪೂರೈಸುತ್ತಿದ್ದಾಗ ಹೇಳಿಕೊಂಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
Kannada BSI Bible 2016
ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ - ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
Kannada Bible (KNCL) BSI 2016
ಯೊವಾನ್ನನು ತನ್ನ ನಿಯೋಗವನ್ನು ಪೂರೈಸುತ್ತಿದ್ದಂತೆ ಜನರಿಗೆ, ‘ನಾನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ವ್ಯಕ್ತಿ ನಾನಲ್ಲ. ನನ್ನ ಅನಂತರ ಒಬ್ಬರು ಬರುವರು; ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ, ‘ನನ್ನನ್ನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ಅವರು ನಾನಲ್ಲ, ಇಗೋ, ಅವರು ನನ್ನ ನಂತರ ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು.