Acts 13:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.
Kannada BSI Bible 2016
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಆತನನ್ನಾಗಲಿ ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲಿ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
Kannada Bible (KNCL) BSI 2016
ಜೆರುಸಲೇಮಿನ ನಿವಾಸಿಗಳು ಮತ್ತು ಅವರ ಅಧಿಕಾರಿಗಳು ಯೇಸು ಲೋಕೋದ್ಧಾರಕನೆಂದು ಅರಿತುಕೊಳ್ಳಲಿಲ್ಲ. ಪ್ರತಿ ಸಬ್ಬತ್‍ದಿನ ಓದಲಾದ ಪ್ರವಾದಿಗಳ ವಾಕ್ಯಗಳನ್ನು ಅವರು ಗ್ರಹಿಸಿಕೊಳ್ಳಲಿಲ್ಲ. ಯೇಸುವಿಗೆ ಮರಣದಂಡನೆಯನ್ನು ವಿಧಿಸಿ ಆ ಪ್ರವಾದನೆಗಳು ನಿಜವಾಗಲು ಕಾರಣರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಯೇಸುವನ್ನು ಯಾರೆಂದು ಗುರುತಿಸಿಲಿಲ್ಲ. ಆದರೂ ಅವರು ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನೂ ಗ್ರಹಿಸಲಿಲ್ಲ. ಅವರು ಯೇಸುವನ್ನು ಅಪರಾಧಿಯೆಂದು ತೀರ್ಪು ಮಾಡಿ, ಪ್ರವಾದಿಗಳ ವಾಕ್ಯಗಳನ್ನು ನೆರವೇರಿಸಿದರು.