Acts 13:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಯೇಸುವಿಗೆ ಸಂಭವಿಸಬೇಕಾಗಿದ್ದ ಕೆಟ್ಟವುಗಳನ್ನೆಲ್ಲ ಯೆಹೂದ್ಯರು ಆತನಿಗೆ ಮಾಡಿದರು. ಬಳಿಕ ಅವರು ಯೇಸುವನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
Kannada BSI Bible 2016
ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವದನ್ನೆಲ್ಲಾ ನೆರವೇರಿಸಿದ ಮೇಲೆ ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
Kannada Bible (KNCL) BSI 2016
ಯೇಸುವನ್ನು ಕುರಿತು ಪವಿತ್ರಗ್ರಂಥ ಹೇಳುವುದೆಲ್ಲವೂ ನೆರವೇರಿದ ಮೇಲೆ ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪವಿತ್ರ ವೇದದಲ್ಲಿ ಯೇಸುವನ್ನು ಕುರಿತು ಬರೆದಿರುವ ಪ್ರಕಾರ ನೆರವೇರಿದ ನಂತರ, ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು.