Acts 13:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಾದ ಮೇಲೆ ಗಲಿಲಾಯದಿಂದ ಯೇಸುವಿನೊಂದಿಗೆ ಜೆರುಸಲೇಮಿಗೆ ಬಂದಿದ್ದವರು, ಅನೇಕ ದಿನಗಳವರೆಗೆ ಆತನನ್ನು ನೋಡಿದರು. ಈಗ ಅವರೇ ಜನರಿಗೆ ಸಾಕ್ಷಿಗಳಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
Kannada BSI Bible 2016
ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಆತನು ಗಲಿಲಾಯದಿಂದ ಯೆರೂಸಲೇವಿುಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರಿಯಂತರ ಕಾಣಿಸಿಕೊಂಡನು. ಅವರು ಈಗ ಜನರ ಮುಂದೆ ಆತನಿಗೆ ಸಾಕ್ಷಿಗಳಾಗಿದ್ದಾರೆ.
Kannada Bible (KNCL) BSI 2016
ಹೀಗೆ ಪುನರುತ್ಥಾನ ಹೊಂದಿದ ಯೇಸು, ಗಲಿಲೇಯದಿಂದ ತಮ್ಮೊಡನೆ ಜೆರುಸಲೇಮಿಗೆ ಬಂದಿದ್ದವರಿಗೆ ಕಾಣಿಸಿಕೊಂಡರು. ಆ ವ್ಯಕ್ತಿಗಳೇ ಈಗ ನಮ್ಮ ಜನರ ಮಧ್ಯೆ ಇರುವ ಯೇಸುವಿನ ಪರವಾದ ಸಾಕ್ಷಿಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನೊಡನೆ ಗಲಿಲಾಯದಿಂದ ಯೆರೂಸಲೇಮಿನವರೆಗೆ ಮುಂಚೆ ಬಂದಿದ್ದವರಿಗೆ ಯೇಸು ಅನೇಕ ದಿನಗಳವರೆಗೆ ಕಾಣಿಸಿಕೊಂಡರು. ಈಗ ಅವರೇ ನಮ್ಮ ಜನರಿಗೆ ಯೇಸುವಿನ ಸಾಕ್ಷಿಗಳಾಗಿದ್ದಾರೆ.