Acts 13:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ವಿಷಯವಾದ ಸುವಾರ್ತೆಯನ್ನು ನಾವು ನಿಮಗೆ ಹೇಳುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;
Kannada BSI Bible 2016
ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಎಬ್ಬಿಸಿದ್ದರಲ್ಲಿ - ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.
Kannada Bible (KNCL) BSI 2016
ನಾವೀಗ ನಿಮಗೆ ಸಾರುವ ಶುಭಸಂದೇಶ ಇದು: ದೇವರು ಯೇಸುಸ್ವಾಮಿಯನ್ನು ಪುನರುತ್ಥಾನಗೊಳಿಸಿದ್ದಾರೆ. ಈ ಮೂಲಕ ನಮ್ಮ ಪೂರ್ವಜರಿಗೆ ಮಾಡಿದ ವಾಗ್ದಾನವನ್ನು ಅವರ ಸಂತತಿಯಾದ ನಮಗಿಂದು ಈಡೇರಿಸಿದ್ದಾರೆ. ಎರಡನೆಯ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ‘ನೀನೇ ನನ್ನ ಪುತ್ರ, ನಾನಿಂದು ನಿನ್ನ ಜನಕ.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾವು ನಿಮಗೆ, ದೇವರು ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ್ದನ್ನು ಶುಭವರ್ತಮಾನವನ್ನಾಗಿ ಹೇಳುತ್ತಿದ್ದೇವೆ.