Acts 13:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಸಮಾಧಿಗೆ ಸೇರಿ ಕೊಳೆಯುವುದಿಲ್ಲ ಎಂಬ ವಿಷಯದಲ್ಲಿ ದೇವರು ಇಂತೆಂದಿದ್ದಾನೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ.
Kannada BSI Bible 2016
ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬದರ ವಿಷಯದಲ್ಲಿ ದೇವರು ಹೇಳಿರುವದೇನಂದರೆ - ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ, ಅವು ನಂಬಿಕೆಯಾದವುಗಳೇ ಎಂಬದು.
Kannada Bible (KNCL) BSI 2016
“ಯೇಸುವನ್ನು ಸಮಾಧಿಯಲ್ಲೇ ಕೊಳೆತುಹೋಗಲು ಬಿಡದೆ ಮರಣದಿಂದ ಪುನರುತ್ಥಾನಗೊಳಿಸಿದ ದೇವರು ಹೀಗೆಂದಿದ್ದಾರೆ: ‘ನಾನು ದಾವೀದನಿಗೆ ವಾಗ್ದಾನಮಾಡಿದ ಪವಿತ್ರ ಹಾಗೂ ನಿಶ್ಚಿತ ವರಗಳನ್ನು ನಿಮಗೆ ಕೊಡುತ್ತೇನೆ.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಯೇಸುವನ್ನು ಸಮಾಧಿಯಲ್ಲಿ ಕೊಳೆಯಲು ಬಿಡದೇ ದೇವರು ಅವರನ್ನು ಜೀವಂತವಾಗಿ ಎಬ್ಬಿಸಿದ ಸತ್ಯವು ಈ ಮಾತುಗಳಲ್ಲಿ ಬಂದಿದೆ: “ ‘ನಾನು ದಾವೀದನಿಗೆ ವಾಗ್ದಾನ ಮಾಡಿದ ಪವಿತ್ರ ಹಾಗೂ ನಿಶ್ಚಯವಾದ ಆಶೀರ್ವಾದಗಳನ್ನು ನಿಮಗೆ ಕೊಡುವೆನು’