Acts 13:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ತನ್ನ ಜೀವಮಾನಕಾಲದಲ್ಲಿ ದೇವರ ಚಿತ್ತಕ್ಕನುಸಾರವಾಗಿ ಬಾಳಿದನು. ಬಳಿಕ ಅವನು ಸತ್ತುಹೋದನು. ದಾವೀದನನ್ನು ಅವನ ಪಿತೃಗಳೊಂದಿಗೆ ಸಮಾಧಿಮಾಡಲಾಯಿತು. ಅವನ ದೇಹ ಸಮಾಧಿಯಲ್ಲಿ ಕೊಳೆತುಹೋಯಿತು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.
Kannada BSI Bible 2016
ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನಾದರೋ ತನ್ನ ಸಕಾಲದವರಿಗೆ ಸೇವೆಮಾಡಿದನಂತರ ದೈವಸಂಕಲ್ಪದಿಂದ ನಿದ್ದೆಹೋಗಿ ತನ್ನ ಪಿತೃಗಳ ಬಳಿಯಲ್ಲಿ ಇಡಲ್ಪಟ್ಟು ಕೊಳೆಯುವ ಅವಸ್ಥೆಯನ್ನು ಅನುಭವಿಸಿದನು.
Kannada Bible (KNCL) BSI 2016
“ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.