Acts 13:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರರೇ, ಇದು ನಿಮಗೆ ತಿಳಿದಿರಲಿ: ಆತನ ಮೂಲಕವಾಗಿ ನಿಮ್ಮ ಪಾಪಗಳಿಗೆ ಕ್ಷಮೆ ದೊರೆಯುತ್ತದೆ. ಮೋಶೆಯ ಧರ್ಮಶಾಸ್ತ್ರಕ್ಕೆ, ನಿಮ್ಮನ್ನು ನಿಮ್ಮ ಪಾಪಗಳಿಂದ ಬಿಡಿಸಲಾಗಲಿಲ್ಲ. ಆದರೆ ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನು ಆತನ ಮೂಲಕವಾಗಿ ತನ್ನ ಎಲ್ಲಾ ಪಾಪಗಳಿಂದ ಬಿಡುಗಡೆಯಾಗುವನು. (Verses 38-39)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.
Kannada BSI Bible 2016
ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗುತ್ತದೆಂದು ನಿಮಗೆ ತಿಳಿದಿರಲಿ.
Kannada Bible (KNCL) BSI 2016
“ನನ್ನ ಸಹೋದರರೇ, ನಿಮಗಿದು ತಿಳಿದಿರಲಿ: ಪಾಪಕ್ಷಮೆ ಯೇಸುವಿನ ಮುಖಾಂತರವೇ ಸಾಧ್ಯ ಎಂದು ಸಾರಲಾಗುತ್ತಿದೆ. ಮೋಶೆಯ ನಿಯಮಗಳ ಪಾಲನೆಯ ಮೂಲಕ ಪಾಪಗಳಿಂದ ವಿಮೋಚನೆ ಹೊಂದಲು ನಿಮ್ಮಿಂದಾಗಲಿಲ್ಲ; ಆದರೆ ಯೇಸುವನ್ನು ವಿಶ್ವಾಸಿಸುವ ಪ್ರತಿ ಒಬ್ಬನೂ ಅವೆಲ್ಲವುಗಳಿಂದ ವಿಮೋಚನೆ ಪಡೆಯುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ, ನನ್ನ ಸಹೋದರರೇ, ಯೇಸುವಿನ ಮೂಲಕವೇ ಪಾಪಕ್ಷಮಾಪಣೆ ಸಾಧ್ಯವೆಂದು ನಿಮಗೆ ಸಾರಲಾಗುತ್ತಿದೆಯೆಂದು ನೀವು ತಿಳಿಯಬೇಕೆಂಬುದೇ ನನ್ನ ಅಪೇಕ್ಷೆ.