Acts 13:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾರ್ನಬ ಮತ್ತು ಸೌಲರನ್ನು ಪವಿತ್ರಾತ್ಮನೇ ಕಳುಹಿಸಿಕೊಟ್ಟನು. ಅವರು ಸೆಲೂಸಿಯಾ ಪಟ್ಟಣಕ್ಕೆ ಹೋದರು. ಬಳಿಕ ಅವರು ಸೆಲೂಸಿಯಾದಿಂದ ಸೈಪ್ರಸ್ ದ್ವೀಪಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.
Kannada BSI Bible 2016
ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಿಕೊಂಡವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.
Kannada Bible (KNCL) BSI 2016
ಹೀಗೆ ಪವಿತ್ರಾತ್ಮ ಅವರೇ ಕಳುಹಿಸಿದ ಬಾರ್ನಬ ಮತ್ತು ಸೌಲ ಸೆಲೂಸಿಯಾಕ್ಕೆ ಹೋದರು. ಅಲ್ಲಿಂದ ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪವಿತ್ರಾತ್ಮ ದೇವರಿಂದ ಕಳುಹಿಸಲಾದ ಅವರಿಬ್ಬರೂ ಸೆಲ್ಯೂಕ್ಯಕ್ಕೆ ಹೋಗಿ ಅಲ್ಲಿಂದ ನೌಕೆಯಲ್ಲಿ ಪ್ರಯಾಣಮಾಡಿ ಸೈಪ್ರಸಿಗೆ ತಲುಪಿದರು.