Acts 13:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಅಪಹಾಸ್ಯ ಮಾಡುವವರೇ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.
Kannada BSI Bible 2016
ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೈ ತಿರಸ್ಕಾರಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದು ಎಂದು ಹೇಳಿದನು.
Kannada Bible (KNCL) BSI 2016
‘ಅವಹೇಳನ ಮಾಡುವವರೇ, ಗಮನಿಸಿರಿ; ದಿಗ್ಭ್ರಮೆಗೊಂಡು ದಿಕ್ಕುಪಾಲಾಗಿರಿ; ನಿಮ್ಮ ಕಾಲದಲ್ಲೇ ನಾನೊಂದು ಮಹತ್ಕಾರ್ಯವನ್ನು ಮಾಡುತ್ತೇನೆ; ಅದನ್ನು ನೀವು ನಂಬಲಾರಿರಿ, ಇನ್ನೊಬ್ಬರು ವಿವರಿಸಿ ಹೇಳಿದರೂ ನಂಬಲಾರಿರಿ’, “ ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ತಿರಸ್ಕಾರ ಮಾಡುವವರೇ, ಗಮನಿಸಿರಿ, ಆಶ್ಚರ್ಯಪಟ್ಟು, ಚದುರಿ ಹೋಗಿರಿ, ನಿಮ್ಮ ಜೀವಮಾನ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡಲಿದ್ದೇನೆ ಆ ಕಾರ್ಯವನ್ನು ಯಾರಾದರೂ ವಿವರಿಸಿ ಹೇಳಿದರೂ ನೀವದನ್ನು ಎಂದಿಗೂ ನಂಬುವುದೇ ಇಲ್ಲ,’ ” ಎಂದು ಹೇಳಿದನು.