Acts 13:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೌಲ ಮತ್ತು ಬಾರ್ನಬ ಸಭಾಮಂದಿರದಿಂದ ಹೋಗುವಾಗ, ಈ ಸಂಗತಿಗಳ ಬಗ್ಗೆ ಇನ್ನೂ ಹೆಚ್ಚಿಗೆ ತಿಳಿಸುವುದಕ್ಕಾಗಿ ಮುಂದಿನ ಸಬ್ಬತ್‌ದಿನದಂದು ಮತ್ತೆ ಬರಬೇಕೆಂದು ಜನರು ಅವರನ್ನು ಕೇಳಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.
Kannada BSI Bible 2016
ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನೂ ಬಾರ್ನಬನೂ ಸಭಾಮಂದಿರವನ್ನು ಬಿಟ್ಟುಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್‍ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.
Kannada Bible (KNCL) BSI 2016
ಪೌಲ ಮತ್ತು ಬಾರ್ನಬ ಪ್ರಾರ್ಥನಾಮಂದಿರವನ್ನು ಬಿಟ್ಟುಹೊರಟರು. “ಮುಂದಿನ ಸಬ್ಬತ್‍ದಿನ ಪುನಃ ಬಂದು ಈ ವಿಷಯಗಳ ಬಗ್ಗೆ ಹೆಚ್ಚು ತಿಳಿಸಿರಿ,” ಎಂದು ಜನರು ಕೇಳಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೌಲ ಬಾರ್ನಬರು ಸಭಾಮಂದಿರವನ್ನು ಬಿಟ್ಟು ಹೊರಡುವಾಗ, “ಬರುವ ಸಬ್ಬತ್ ದಿನವೂ ಬಂದು ಇದೇ ವಿಷಯಗಳನ್ನು ಕುರಿತು ಮಾತನಾಡಿರಿ,” ಎಂದು ಜನರು ಅವರನ್ನು ಕೇಳಿಕೊಂಡರು.
Recommended Reading