Acts 13:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಭೆಯು ಮುಗಿದ ಮೇಲೆ ಅನೇಕ ಯೆಹೂದ್ಯರು ಪೌಲ ಬಾರ್ನಬರನ್ನು ಆ ಸ್ಥಳದಿಂದ ಹಿಂಬಾಲಿಸಿದರು. ಯೆಹೂದ್ಯರ ಧರ್ಮಕ್ಕೆ ಸೇರಿಕೊಂಡಿದ್ದ ಅನೇಕ ಅನ್ಯಮತೀಯರೂ ಆ ಯೆಹೂದ್ಯರೊಂದಿಗಿದ್ದರು. ಮತಾಂತರಗೊಂಡಿದ್ದ ಇವರು ಸಹ ನಿಜದೇವರನ್ನು ಆರಾಧಿಸುತ್ತಿದ್ದರು. ಪೌಲ ಬಾರ್ನಬರು ಅವರೊಂದಿಗೆ ಮಾತಾಡಿ, ದೇವರ ಕೃಪೆಯಲ್ಲೇ ಭರವಸವಿಟ್ಟು ಮುಂದುವರಿಯಬೇಕೆಂದು ಪ್ರೋತ್ಸಾಹಪಡಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
Kannada BSI Bible 2016
ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಭಿಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
Kannada Bible (KNCL) BSI 2016
ಪ್ರಾರ್ಥನಾಕೂಟ ಮುಗಿದಮೇಲೆ ಅನೇಕ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳಾದ ಅನ್ಯರೂ ಪೌಲ ಮತ್ತು ಬಾರ್ನಬರನ್ನು ಹಿಂಬಾಲಿಸಿದರು. ಈ ಪ್ರೇಷಿತರು ಅವರೊಡನೆ ಮಾತನಾಡಿ ದೈವಾನುಗ್ರಹದಲ್ಲಿ ದೃಢವಾಗಿ ಬಾಳುವಂತೆ ಪ್ರೋತ್ಸಾಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಭೆಯು ಮುಗಿದ ತರುವಾಯ ಅನೇಕ ಯೆಹೂದ್ಯರೂ ದೇವಭಕ್ತಿವುಳ್ಳ ಯೆಹೂದಿ ಮಾರ್ಗದ ವಿಶ್ವಾಸಿಗಳು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಪೌಲ ಬಾರ್ನಬರು ತಮ್ಮೊಂದಿಗೆ ಬಂದವರ ಜೊತೆ ಮಾತನಾಡಿ ದೇವರ ಕೃಪೆಯಲ್ಲಿ ಮುಂದುವರಿಯಲು ಅವರನ್ನು ಒಡಂಬಡಿಸಿದರು.