Acts 13:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.
Kannada BSI Bible 2016
ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಜನರು ಗುಂಪುಗುಂಪಾಗಿ ಬರುವದನ್ನು ನೋಡಿ ಯೆಹೂದ್ಯರು ಮತಾಭಿಮಾನದಿಂದ ತುಂಬಿದವರಾಗಿ ಪೌಲನು ಹೇಳಿದ ಮಾತುಗಳಿಗೆ ಎದುರ್ಚಂಡಿಸುತ್ತಾ ದೂಷಣೆ ಮಾಡುತ್ತಾ ಇದ್ದರು.
Kannada Bible (KNCL) BSI 2016
ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.