Acts 13:48 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೌಲನ ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲದ ಜನರು ಬಹು ಸಂತೋಷಪಟ್ಟು ಪ್ರಭುವಿನ ಸಂದೇಶಕ್ಕಾಗಿ ಸ್ತುತಿಸಿದರು. ನಿತ್ಯಜೀವವನ್ನು ಹೊಂದಿಕೊಳ್ಳಲು ಆಯ್ಕೆಯಾಗಿದ್ದವರೆಲ್ಲರೂ ನಂಬಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
Kannada BSI Bible 2016
ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ದೇವರ ವಾಕ್ಯವನ್ನು ಹೊಗಳಿದರು; ಮತ್ತು ನಿತ್ಯಜೀವಕ್ಕೆ ನೇವಿುಸಲ್ಪಟ್ಟವರೆಲ್ಲರು ನಂಬಿದರು.
Kannada Bible (KNCL) BSI 2016
ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯರಲ್ಲದವರು ಇದನ್ನು ಕೇಳಿದಾಗ, ಬಹಳ ಹರ್ಷಗೊಂಡು ಕರ್ತದೇವರ ವಾಕ್ಯವನ್ನು ಘನಪಡಿಸಿದರು. ನಿತ್ಯಜೀವಕ್ಕೆ ನೇಮಕರಾದ ಎಲ್ಲರೂ ವಿಶ್ವಾಸವನ್ನಿಟ್ಟರು.