Acts 13:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾರ್ನಬ ಮತ್ತು ಸೌಲರು ಸಲಾಮಿಸ್ ಪಟ್ಟಣಕ್ಕೆ ಬಂದಾಗ ಯೆಹೂದ್ಯರ ಸಭಾಮಂದಿರದಲ್ಲಿ ದೇವರ ಸಂದೇಶವನ್ನು ಸಾರಿದರು. (ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯ ಮಾಡುವುದಕ್ಕಾಗಿ ಅವರೊಂದಿಗಿದ್ದನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.
Kannada BSI Bible 2016
ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಲಮೀಸಿಗೆ ಸೇರಿದಾಗ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಪ್ರಸಿದ್ಧಿಪಡಿಸಿದರು. ಯೋಹಾನನು ಪರಿಚಾರಕನಾಗಿ ಅವರ ಸಂಗಡ ಇದ್ದನು.
Kannada Bible (KNCL) BSI 2016
ಅವರು ಸಲಮೀಸ್ ಎಂಬ ಸ್ಥಳಕ್ಕೆ ಬಂದಾಗ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಶುಭಸಂದೇಶವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೊವಾನ್ನ ಅವರ ಸಂಗಡವಿದ್ದು ಅವರಿಗೆ ನೆರವಾಗುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಲಮೀಸಿಗೆ ಬಂದು, ಅಲ್ಲಿಯ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೋಹಾನನು ಸಹ ಅವರೊಂದಿಗಿದ್ದು ಅವರಿಗೆ ಸಹಾಯಕನಾಗಿದ್ದನು.