Acts 13:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೆರ್ಗ್ಯಪೌಲನೆಂಬ ರಾಜ್ಯಪಾಲನ ಹತ್ತಿರದಲ್ಲೇ ಅವನು ಯಾವಾಗಲೂ ಇರುತ್ತಿದ್ದನು. ಸೆರ್ಗ್ಯಪೌಲನು ಜ್ಞಾನವಂತನಾಗಿದ್ದನು. ಅವನು ದೇವರ ವಾಕ್ಯವನ್ನು ಕೇಳಲು ಬಾರ್ನಬ ಮತ್ತು ಸೌಲರನ್ನು ಆಮಂತ್ರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು.
Kannada BSI Bible 2016
ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬುದ್ಧಿವಂತನಾಗಿದ್ದ ಸೆರ್ಗ್ಯಪೌಲನೆಂಬ ಅಧಿಪತಿಯ ಹತ್ತಿರದಲ್ಲಿದ್ದನು. ಅಧಿಪತಿಯು ಬಾರ್ನಬ ಸೌಲರನ್ನು ತನ್ನ ಬಳಿಗೆ ಕರಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷೆ ಅದೆ ಎಂದು ಹೇಳಿದನು.
Kannada Bible (KNCL) BSI 2016
ತಾನೊಬ್ಬ ಪ್ರವಾದಿಯೆಂದು ನಟಿಸುತ್ತಿದ್ದ ಯೆಹೂದ್ಯ ಅವನು; ಮಾತ್ರವಲ್ಲ, ಅಲ್ಲಿಯ ರಾಜ್ಯಪಾಲನಾಗಿದ್ದ ಸೆರ್ಗ್ಯಪೌಲನ ಪರಿವಾರಕ್ಕೆ ಸೇರಿದ್ದನು. ಈ ರಾಜ್ಯಪಾಲನೊಬ್ಬ ಜ್ಞಾನಿ. ಇವನು ದೇವರವಾಕ್ಯವನ್ನು ಕೇಳಲಪೇಕ್ಷಿಸಿ ಬಾರ್ನಬ ಮತ್ತು ಸೌಲರನ್ನು ಆಹ್ವಾನಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ರಾಜ್ಯಪಾಲ ಸೆರ್ಗ್ಯಪೌಲನ ಜೊತೆಗಿದ್ದನು. ಈ ರಾಜ್ಯಪಾಲನು ಬುದ್ಧಿವಂತನಾಗಿದ್ದನು. ಇವನು ದೇವರ ವಾಕ್ಯವನ್ನು ಕೇಳುವ ಉದ್ದೇಶದಿಂದ ಬಾರ್ನಬ ಮತ್ತು ಸೌಲರನ್ನು ಕರೆಕಳುಹಿಸಿದನು.