Acts 13:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಮಂತ್ರವಾದಿಯಾದ ಎಲಿಮನು ಬಾರ್ನಬ ಮತ್ತು ಸೌಲರಿಗೆ ವಿರೋಧವಾಗಿದ್ದನು. (ಬಾರ್ ಯೇಸುವನ್ನು ಗ್ರೀಕ್ ಭಾಷೆಯಲ್ಲಿ ಎಲಿಮ ಎಂದು ಕರೆಯುತ್ತಿದ್ದರು.) ರಾಜ್ಯಪಾಲನು ಯೇಸುವಿನಲ್ಲಿ ನಂಬಿಕೆ ಇಡದ ಹಾಗೆ ಮಾಡಲು ಎಲಿಮನು ಪ್ರಯತ್ನಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.
Kannada BSI Bible 2016
ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯು ಕ್ರಿಸ್ತನನ್ನು ನಂಬದ ಹಾಗೆ ಪ್ರಯತ್ನಿಸಿದನು. ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದೇ ಅರ್ಥ.
Kannada Bible (KNCL) BSI 2016
ಆದರೆ ಆ ಮಂತ್ರವಾದಿ (ಗ್ರೀಕ್ ಭಾಷೆಯಲ್ಲಿ ಅವನನ್ನು ‘ಎಲಿಮ’ ಎಂದು ಕರೆಯುತ್ತಿದ್ದರು) ಅವರನ್ನು ವಿರೋಧಿಸಿದನು. ರಾಜ್ಯಪಾಲನು ವಿಶ್ವಾಸಿಯಾಗದಂತೆ ತಡೆಯಲು ಯತ್ನಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮಂತ್ರವಾದಿಯಾದ ಎಲುಮನು ಅವರನ್ನು ವಿರೋಧಿಸಿ ರಾಜ್ಯಪಾಲನು ವಿಶ್ವಾಸಿಯಾಗದಂತೆ ಅಡ್ಡಿಮಾಡಲು ಪ್ರಯತ್ನಿಸಿದನು. ಎಲುಮ ಎಂಬ ಹೆಸರಿಗೆ ಮಂತ್ರವಾದಿ ಎಂಬುದೇ ಅರ್ಥ.