Acts 14:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೌಲ ಬಾರ್ನಬರು ಇಕೋನಿಯಾ ಪಟ್ಟಣಕ್ಕೆ ಹೋದರು. (ಪ್ರತಿಯೊಂದು ಪಟ್ಟಣದಲ್ಲಿಯೂ ಅವರು ಮಾಡುತ್ತಿದ್ದಂತೆ) ಇಲ್ಲಿಯೂ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಜನರಿಗೆ ಬೋಧಿಸಿದರು. ಪೌಲ ಬಾರ್ನಬರ ಅಮೋಘ ಬೋಧನೆಯನ್ನು ಕೇಳಿ ಅನೇಕ ಯೆಹೂದ್ಯರು ಮತ್ತು ಗ್ರೀಕರು ನಂಬಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.
Kannada BSI Bible 2016
ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಕೋನ್ಯದಲ್ಲಿ ಪೌಲ ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಬಲವಾಗಿ ಮಾತಾಡಿದ್ದರಿಂದ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ಬಹುಮಂದಿ ನಂಬುವವರಾದರು.
Kannada Bible (KNCL) BSI 2016
ಇಕೋನಿಯದಲ್ಲೂ ಪೌಲ ಮತ್ತು ಬಾರ್ನಬ ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು. ಅವರ ಅಮೋಘ ಬೋಧನೆಯನ್ನು ಕೇಳಿ ಯೆಹೂದ್ಯರು ಮತ್ತು ಗ್ರೀಕರು ಬಹುಸಂಖ್ಯೆಯಲ್ಲಿ ಭಕ್ತವಿಶ್ವಾಸಿಗಳಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಕೋನ್ಯದಲ್ಲಿಯೂ ಪೌಲ ಮತ್ತು ಬಾರ್ನಬರು ವಾಡಿಕೆಯಂತೆ ಯೆಹೂದ್ಯರ ಸಭಾಮಂದಿರಕ್ಕೆ ಹೋದರು. ಅವರು ಅಲ್ಲಿ ಪರಿಣಾಮಕಾರಿಯಾಗಿ ಮಾತನಾಡಿದ್ದರಿಂದ ಬಹು ಸಂಖ್ಯೆಯಲ್ಲಿ ಯೆಹೂದ್ಯರೂ ಗ್ರೀಕರೂ ವಿಶ್ವಾಸವನ್ನಿಟ್ಟರು.