Acts 14:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೌಲನು ಮಾಡಿದ ಈ ಕಾರ್ಯವನ್ನು ಕಂಡ ಜನರು ತಮ್ಮ ಸ್ವಂತ ಲುಕವೋನಿಯ ಭಾಷೆಯಲ್ಲಿ “ದೇವರುಗಳು ಮನುಷ್ಯರೂಪಧರಿಸಿ ನಮ್ಮ ಬಳಿಗೆ ಇಳಿದು ಬಂದಿದ್ದಾರೆ!” ಎಂದು ಆರ್ಭಟಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನು ಮಾಡಿದ್ದನ್ನು ಗುಂಪು ಕೂಡಿದ್ದ ಜನರು ನೋಡಿ; “ದೇವರುಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದುಬಂದರು” ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.
Kannada BSI Bible 2016
ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನು ಮಾಡಿದ್ದನ್ನು ಗುಂಪುಕೂಡಿದ್ದ ಜನರು ನೋಡಿ - ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.
Kannada Bible (KNCL) BSI 2016
ಪೌಲನು ಮಾಡಿದ ಈ ಮಹತ್ಕಾರ್ಯವನ್ನು ಜನಸಮೂಹವು ನೋಡಿತು. “ದೇವರುಗಳೇ ಮನುಷ್ಯರೂಪದಲ್ಲಿ ನಮ್ಮಲ್ಲಿಗೆ ಬಂದಿದ್ದಾರೆ,” ಎಂದು ತಮ್ಮ ಲುಕವೋನಿಯ ಭಾಷೆಯಲ್ಲಿ ಗಟ್ಟಿಯಾಗಿ ಕೂಗಲಾರಂಭಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೌಲನು ಮಾಡಿದ್ದನ್ನು ಜನರು ಕಂಡಾಗ, ಲುಕವೋನಿಯ ಭಾಷೆಯಲ್ಲಿ, “ಮಾನವ ರೂಪದಲ್ಲಿ ದೇವರುಗಳು ಬಂದಿದ್ದಾರೆ!” ಎಂದು ಘೋಷಿಸಿದರು.