Acts 14:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೌಲ ಬಾರ್ನಬರು ದರ್ಬೆ ಪಟ್ಟಣದಲ್ಲೂ ಸುವಾರ್ತೆಯನ್ನು ತಿಳಿಸಿದರು. ಅನೇಕ ಜನರು ಯೇಸುವಿನ ಶಿಷ್ಯರಾದರು. ಪೌಲಬಾರ್ನಬರು ಲುಸ್ತ್ರ, ಇಕೋನಿಯ ಮತ್ತು ಅಂತಿಯೋಕ್ಯ ಪಟ್ಟಣಗಳಿಗೆ ಹಿಂತಿರುಗಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.
Kannada BSI Bible 2016
ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರಾಗಿ ಮಾಡಿದ ಮೇಲೆ ಹಿಂತಿರಿಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
Kannada Bible (KNCL) BSI 2016
ದೆರ್ಬೆಯಲ್ಲಿ ಪೌಲ ಮತ್ತು ಬಾರ್ನಬ ಶುಭಸಂದೇಶವನ್ನು ಸಾರಿ ಅನೇಕರನ್ನು ಭಕ್ತವಿಶ್ವಾಸಿಗಳನ್ನಾಗಿ ಮಾಡಿಕೊಂಡರು. ಅನಂತರ ಅಲ್ಲಿಂದ ಲುಸ್ತ್ರಕ್ಕೂ ಇಕೋನಿಯಕ್ಕೂ ಅಂತಿಯೋಕ್ಯಕ್ಕೂ ಹಿಂದಿರುಗಿ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪಟ್ಟಣದಲ್ಲಿ ಪೌಲ, ಬಾರ್ನಬರು ಸುವಾರ್ತೆಯನ್ನು ಸಾರಿದರು. ಬಹುಜನರನ್ನು ಶಿಷ್ಯರನ್ನಾಗಿ ಮಾಡಿದರು. ಅನಂತರ ಅವರು ಲುಸ್ತ್ರ, ಇಕೋನ್ಯ ಮತ್ತು ಅಂತಿಯೋಕ್ಯಗಳಿಗೆ ಹಿಂದಿರುಗಿದರು.