Acts 14:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು; “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.
Kannada BSI Bible 2016
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.
Kannada Bible (KNCL) BSI 2016
ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.