Acts 14:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.
Kannada BSI Bible 2016
ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆದದ್ದನ್ನೂ ವಿವರವಾಗಿ ಹೇಳಿದರು.
Kannada Bible (KNCL) BSI 2016
ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು.