Acts 14:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದನ್ನು ಅರಿತುಕೊಂಡ ಪೌಲ ಬಾರ್ನಬರು ಆ ಪಟ್ಟಣವನ್ನು ಬಿಟ್ಟು ಲುಕವೋನಿಯಾದ ಪಟ್ಟಣಗಳಾದ ಲುಸ್ತ್ರ ಮತ್ತು ದರ್ಬೆಗಳಿಗೂ ಹಾಗೂ ಆ ಪಟ್ಟಣಗಳ ಸುತ್ತಮುತ್ತಲಿದ್ದ ಪ್ರದೇಶಗಳಿಗೂ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,
Kannada BSI Bible 2016
ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅಪೊಸ್ತಲರು ಅದನ್ನು ತಿಳಿದು ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ
Kannada Bible (KNCL) BSI 2016
ಇದನ್ನರಿತುಕೊಂಡ ಪ್ರೇಷಿತರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆಗೂ ಅದರ ಸುತ್ತಮುತ್ತಲ ಪ್ರದೇಶಗಳಿಗೂ ಹೊರಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ವಿಷಯ ಅಪೊಸ್ತಲರಿಗೆ ತಿಳಿಯಲು ಅವರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆ ಹಾಗೂ ಅವುಗಳ ಸುತ್ತಮುತ್ತಲ ಪ್ರದೇಶಗಳಿಗೆ ಓಡಿಹೋದರು.