Acts 15:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಇದಾದನಂತರ ನಾನು ಹಿಂತಿರುಗುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು. ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ ಸುಭದ್ರವಾಗಿ ನಿಲ್ಲಿಸುವೆನು.
Kannada BSI Bible 2016
ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತುವೆನು. ಅದರಲ್ಲಿ ಹಾಳಾದದ್ದನ್ನು ನಾನು ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.
Kannada Bible (KNCL) BSI 2016
‘ಅಳಿದುಹೋದ ದಾವೀದನ ಮನೆತನವನು ಪುನರ್‍ಸ್ಥಾಪಿಸಲು ಮರಳಿ ಬರುವೆನು ಪಾಳುಬಿದ್ದುದನು ಜೀರ್ಣೋದ್ಧಾರಗೊಳಿಸುವೆನು ಸುಭದ್ರವಾಗಿ ನಿಲ್ಲಿಸುವೆನು ಅದನ್ನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇದಾದನಂತರ ನಾನು ಮರಳಿ ಬರುವೆನು. ಬಿದ್ದುಹೋದ ದಾವೀದನ ಗುಡಾರವನ್ನು ಕಟ್ಟುವೆನು. ಪಾಳುಬಿದ್ದದ್ದನ್ನು ಜೀರ್ಣೋದ್ಧಾರ ಮಾಡಿ, ಅದನ್ನು ಪುನರುಜ್ಜೀವನಗೊಳಿಸುವೆನು.